ಬಸ್‌ಗೆ ಲಾರಿ ಡಿಕ್ಕಿ; ಓರ್ವ ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ

ಉಡುಪಿ : ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸಹಿತ ಹಲವು ಮಂದಿ ಗಾಯಗೊಂಡ ಘಟನೆ ಕುಂದಾಪುರ ತಲ್ಲೂರು ಪ್ರವಾಸಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66‌ರಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಬಸ್ ಬೈಂದೂರಿಂದ ಕುಂದಾಪುರಕ್ಕೆ ಬರುತ್ತಿತ್ತು. ಅದೇ ಮಾರ್ಗದಲ್ಲಿ ಬರುತ್ತಿದ್ದ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ಸಿಲ್ಲಿದ್ದ ಓರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, 7-8 ಮಂದಿ ವಿದ್ಯಾರ್ಥಿಗಳು ಸಹಿತ ಹಲವರಿಗೆ ಗಾಯವಾಗಿದೆ. ಲಾರಿಯ ಚಾಲಕ, ನಿರ್ವಾಹಕ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಹಿಂಬದಿ ಹಾಗೂ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ