ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ

ಉಡುಪಿ : ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ, ಕಾಪು ಮೂಲದ ನಿವಾಸಿಯೋರ್ವರು ಜೂನ್ 7‌ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ನಾಪತ್ತೆಯಾದ ವ್ಯಕ್ತಿಯನ್ನು ಪೈಂಟಿoಗ್ ಕೆಲಸ ಮಾಡಿಕೊಂಡಿದ್ದ ಪ್ರೀತಮ್ ಅಮೀನ್ (38) ಎಂದು ಗುರುತಿಸಲಾಗಿದೆ.

ಪ್ರೀತಮ್ ಅಮೀನ್ 5 ಅಡಿ 7 ಇಂಚು ಎತ್ತರ, ಕಪ್ಪು ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ:0820-2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ