ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದು ಅಸ್ವಸ್ಥಗೊಂಡಿದ್ದ ವ್ಯಕ್ತಿ ಮೃತ್ಯು

ಉಡುಪಿ : ಮಲ್ಪೆ ತೊಟ್ಟಂ‌ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ.

ಮೃತ ದುರ್ದೈವಿಯನ್ನು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಮಲ್ಪೆ ನಿವಾಸಿ 39 ವರ್ಷ ಪ್ರಾಯದ ಸತೀಶ ಎಂದು ಗುರುತಿಸಲಾಗಿದೆ.

ಸತೀಶ ಇವರು, ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು.

ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಸೆ.12ರಂದು ನಸುಕಿನ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ