ಹೊಳೆಗೆ ಕಪ್ಪೆ ಚಿಪ್ಪು ತೆಗೆಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವು

ಬ್ರಹ್ಮಾವರ : ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ಹೊಳೆಗೆ ಕಪ್ಪೆ ಚಿಪ್ಪು ತೆಗೆಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಸಾಸ್ತಾನದ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ನೀರಿಗೆ ಬಿದ್ದು ಮೃತಪಟ್ಟವರು.

ಇವರು ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲೆಂದು ಹೋದವರು ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು. ಇಂದು ಬೆಳಿಗ್ಗೆ ಸಾಸ್ತಾನ ಕೋಡಿ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಕೋಟ ಪೊಲೀಸ್ ಠಾಣೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಕೋಟ ಪೊಲೀಸರು ದೋಣಿಯಲ್ಲಿ ಕಾರ್ಯಾಚರಣೆ ನಡೆಸಿ ರಾಜು ಅವರ ಶವವನ್ನು ದಡಕ್ಕೆ ತಂದರು. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !