ಹಿಂದೂ ಯುವಸೇನೆ ಹಿರಿಯಡಕ ನೇತೃತ್ವದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಹಿರಿಯಡಕ : ಹಿಂದೂ ಯುವಸೇನೆ ಹಿರಿಯಡಕ ಶಾಖೆ ವತಿಯಿಂದ ರಕ್ತನಿಧಿ ವಿಭಾಗ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ರಕ್ತದಾನ ಶಿಬಿರವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಹಿಂದೂ ಯುವಸೇನೆ ಗೌರವಾಧ್ಯಕ್ಷ ಶೇಖರ್ ಶೆಟ್ಟಿ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷ ಅಜಿತ್ ಕೊಡವೂರ್, ರಕ್ತನಿಧಿ ವಿಭಾಗ ಜಿಲ್ಲಾಸ್ಪತ್ರೆ ಉಡುಪಿ ಇದರ ಡಾ. ವೀಣಾ ಕುಮಾರಿ, ಹಿಂದೂ ಯುವ ಸೇನೆ ನಗರ ಅಧ್ಯಕ್ಷ ಸುನಿಲ್ ನೇಜಾರ್, ಸಲಹಾ ಸಮಿತಿಯ ಸನತ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಂದರ್, ಹಿಂದೂ ಯುವಸೇನೆ ಹಿರಿಯಡ್ಕ ಶಾಖೆ ಅಧ್ಯಕ್ಷ ಅಶೋಕ್ ಶೆಟ್ಟಿ, ಉದ್ಯಮಿ ಅಮರನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ