ದುಶ್ಚಟಮುಕ್ತ ಸಮಾಜಕ್ಕಾಗಿ ಬೃಹತ್ ಜನಜಾಗೃತಿ ಜಾಥಾಗೆ ಚಾಲನೆ

ಉಡುಪಿ : ದುಶ್ಚಟ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಡಾ. ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಬಹುಮುಖ್ಯ ಕಾರ್ಯಕ್ರಮ ಜನಜಾಗೃತಿಯ ಮೂಲಕ ಸಮಾಜದಲ್ಲಿ ಮುಖ್ಯವಾಗಿ ದುರ್ಬಲ ವರ್ಗದಲ್ಲಿ ದುಶ್ಚಟಗಳಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು. ಇದಕ್ಕಾಗಿ ಸಮಾಜದ ಗಣ್ಯರ ಸಹಭಾಗಿತ್ವವುಳ್ಳ ರಾಜ್ಯ ಮಟ್ಟದ ಜನಜಾಗೃತಿ ವೇದಿಕೆಯನ್ನು ಸ್ಥಾಪಿಸಲಾಗಿದೆ.

ಕಳೆದ 21 ವರ್ಷಗಳಿಂದ ಉಡುಪಿ ಜಿಲ್ಲೆಯಾದ್ಯಂತ ಮದ್ಯಪಾನ, ದುಶ್ಚಟ, ಮಾದಕ ವಸ್ತುಗಳ ವಿರುದ್ಧ ಆಂದೋಲನ ಜಾಗೃತಿ, ಮನಪರಿವರ್ತನೆ ಮಾಡುವ ಜನಜಾಗೃತಿ ಕಾರ್ಯಕ್ರಮವು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಉಡುಪಿ ಜಿಲ್ಲೆಯ ವತಿಯಿಂದ ನಡೆಯುತ್ತಿದೆ. ಇದರ ಭಾಗವಾಗಿ ಇಂದು ಬೃಹತ್ ಜನಜಾಗೃತಿ ಜಾಥಾ ನಡೆಯಿತು.

ಉಡುಪಿಯ ಜೋಡುಕಟ್ಟೆಯಿಂದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ನೂರಾರು ಜನರು ಜಾಥಾದಲ್ಲಿ ಜಾಗೃತಿ ಫಲಕಗಳನ್ನು ಹಿಡಿದು ಪ್ರಮುಖ ರಸ್ತೆ ಮೂಲಕ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ಆಕರ್ಷಕ ಟ್ಯಾಬ್ಲೋಗಳು ಗಮನ ಸೆಳೆದವು. ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀಗಳು, ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತ ಗಣ್ಯರು ಭಾಗವಹಿಸಲಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ