ಐದು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ

ಉಡುಪಿ : ಉಡುಪಿ ತಾಲೂಕು ನಿಟ್ಟೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕು ಕೊಂಬಳಿ ಗ್ರಾಮದ ನಿವಾಸಿ ಗಂಗಮ್ಮ (30) ಎಂಬ ಮಹಿಳೆಯು ಡಿಸೆಂಬರ್ 31ರಂದು ತನ್ನ 5 ವರ್ಷದ ಮಗ ಭರತ್‌ನೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಗಂಗಮ್ಮ 4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ ಹಾಗೂ ಭರತ್ 3 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಕೋಲು ಮುಖ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್‌ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಮರದ ದಿಮ್ಮಿಗೆ ಮೀನುಗಾರಿಕಾ ಬೋಟ್ ಡಿಕ್ಕಿ : ಅಪಾರ ಹಾನಿ

ಮೆಸ್ಕಾಂ ಎಟಿಪಿ ಬಿಲ್ ಪಾವತಿ ಸೇವೆ ಪುನರಾರಂಭಿಸಿ : ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಸಿಬಿಐ ಅಧಿಕಾರಿ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ