ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಹೊತ್ತಿಕೊಂಡ ಬೆಂಕಿ..!

ಮಂಗಳೂರು : ಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜನವರಿ 4ರ ಶನಿವಾರ ಸಂಜೆ ಮಂಗಳೂರು ನಗರದ ಲೇಡಿಹಿಲ್ ಬಳಿ ಸಂಭವಿಸಿದೆ.

ಅದೃಷ್ಟವಶಾತ್ ಕಾರಿನಲ್ಲಿ ಚಾಲಕ ಮಾತ್ರ ಇದ್ದಿದ್ದು ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ಗಮನಿಸಿ ಸುರಕ್ಷಿತವಾಗಿ ಕಾರಿನಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ.

ತುರ್ತು ಸೇವೆಗಳಿಗೆ ಕರೆ ಮಾಡಿ ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಲಾಯಿತು. ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ. ಬೆಂಕಿ ಕಾಣಿಸಿಕೊಳ್ಳಲು ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ.

Related posts

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ

ಕಚೇರಿಯ ಎದುರು ನಿಲ್ಲಿಸಿದ್ದ ಬೈಕ್‌ ಕಳವು