ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ; 11ರ ಹರೆಯದ ವಿದ್ಯಾರ್ಥಿನಿ ಸಾವು

ಉಳ್ಳಾಲ : ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ.
ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಮೃತ ವಿದ್ಯಾರ್ಥಿನಿ.

ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್‌ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ.

ರಿಕ್ಷಾದಲ್ಲಿದ್ದ ಇತರೆ ನಾಲ್ವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಜೆ ಸಾರಲಾಗಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ