ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಮೃತ್ಯು

ಮಂಗಳೂರು : ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು, ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ರಜೆಗೆ ಊರಿಗೆ ತೆರಳಿದ್ದ ಅವರು ಬುಧವಾರ ವಾಪಾಸ್ ಬರುವ ಸಂದರ್ಭ ಸುಳ್ಯದಲ್ಲಿ ಅಪಘಾತಕ್ಕೀಡಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

Related posts

ಗುಜರಿ ಅಂಗಡಿ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಜಾತಿ ನಿಂದನೆ ಹಲ್ಲೆ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ

ಫುಟ್ಬಾಲ್‌ ಪಂದ್ಯಾಟದ ವೇಳೆ ಗ್ಯಾಲರಿ ಕುಸಿತ..!