105
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮುನ್ನ ಅವರು ಮಲ್ಪೆಯಲ್ಲಿ ಕರಾವಳಿ ಭದ್ರತಾ ಪೊಲೀಸರೊಂದಿಗೆ ಕೆಲಸ ಮಾಡಿದ್ದರು.