ರಸ್ತೆ ದಾಟುತ್ತಿದ್ದ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ; ಬಾಲಕ ಸಾವು

ಬ್ರಹ್ಮಾವರ : ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತ ಬಾಲಕ ಸ್ಥಳೀಯ ಎಸ್‌ಎಮ್‌ಎಸ್ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ ಬಾಲಕ ವಂಶಿ ಜಿ ಶೆಟ್ಟಿ(14) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಬಾಲಕ ವಂಶಿ ಜಿ ಶೆಟ್ಟಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಕುಂದಾಪುರ ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಮೃತಪಟ್ಟಿದ್ದಾನೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಕೋಳಿ ಅಂಕದ ವಿಚಾರ ಮತ್ತೆ ಮುನ್ನೆಲೆಗೆ; ಉಡುಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!

ಸಾವಿರಾರು ರೂ. ಚಾಕಲೇಟ್ ಕದ್ದೊಯ್ದ ಚಾಕಲೇಟ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ದಾಖಲು!