ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಾಡಲು ಹೋಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು: ಇನ್ನೋರ್ವ ಗಂಭೀರ

ಉಡುಪಿ : ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ(ಆ 28) ನಸುಕಿನ ವೇಳೆ ಕೊನೆಯುಸಿರೆಳೆದಿದ್ದಾನೆ.

ಮೃತಪಟ್ಟ ವಿದ್ಯಾರ್ಥಿಯನ್ನು ತ್ರಿವೆಂಡಮ್‌ನ ಆರೊನ್‌ ರೋಜರ್‌ ಲೀನ್‌(17) ಎಂದು ಗುರುತಿಸಲಾಗಿದೆ.

ಭಾನುವಾರ ಅಲೆವೂರಿನ ನೈಲಪಾದೆಯಲ್ಲಿ(ಆ 25) ಈಜಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಡೆಯಾಗಿದ್ದಾನೆ.

ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇನ್ನೋರ್ವ ಕೋಲ್ಕತ್ತಾದ ಮಾಧವ್‌(18) ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ನಡೆದ ವೇಳೆ ಇಬ್ಬರು ವಿದ್ಯಾರ್ಥಿಗಳು ಪಾರಾಗಿದ್ದರು.

ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಡೆಯಾಗುತ್ತಿದ್ದಂತೆ ದೌಡಾಯಿಸಿದ ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ