ತಂದೆಯನ್ನು ಅರಸುತ್ತಾ ಬಂದ ಮಕ್ಕಳು ಮತ್ತು ವೃದ್ಧೆಗೆ ‘ಹೊಸ ಬದುಕು’ವಿನಲ್ಲಿ ತಾತ್ಕಾಲಿಕ ಆಶ್ರಯ

ಉಡುಪಿ : ಶ್ರೀ ಕೃಷ್ಣಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆ ಮತ್ತು ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ರಕ್ಷಿಸಲಾಗಿದೆ.

ವೃದ್ಧೆಯು ಇಬ್ಬರು ಮೊಮ್ಮಕ್ಕಳೊಂದಿಗೆ ಅಳುತ್ತಿರುವ ಮಾಹಿತಿ ತಿಳಿದ ನಿತ್ಯಾನಂದ ಒಳಕಾಡು ಸ್ಥಳಕ್ಕಾಗಮಿಸಿ ವಿಚಾರಿಸಿದ್ದು, ಮೊಮ್ಮಕ್ಕಳ ತಂದೆ ಒಂದು ವರ್ಷದಿಂದ ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಿಕೊಂಡು ಇಲ್ಲಿಗೆ ಬಂದಿರುವುದಾಗಿ ಗೊತ್ತಾಗಿದೆ. ವೃದ್ಧೆ ಪಕೀರವ್ವ (75)
ಬಾಗಲಕೋಟೆ ಮೂಲದವರಾಗಿದ್ದಾರೆ. ಸದ್ಯ ಅವರನ್ನು ಹೊಸ ಬದುಕು ಆಶ್ರಮದಲ್ಲಿ ಇರಿಸಲಾಗಿದೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಮಕ್ಕಳ ಪೈಕಿ ಹನುಮಂತ (10)ನಿಗೆ ದೊಡ್ಡಣ‌ಗುಡ್ಡೆಯ ಬಾಲಕರ ಬಾಲಭವನದಲ್ಲಿ ಹಾಗೂ ಪ್ರೇಮಾ(16)ಳಿಗೆ ನಿಟ್ಟೂರು ಬಾಲಕಿಯರ ಬಾಲ ಭವನದಲ್ಲಿ ಆಶ್ರಯ ನೀಡಲಾಗಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !