ಟಿಪ್ಪರ್ ಹಾಗೂ ಕಾರ್ ಮಧ್ಯೆ ಭೀಕರ ಅಪಘಾತ : ಸ್ಥಳದಲ್ಲಿಯೇ ಕೊನೆಯುಸಿರೆಳೆದ ಟಿಪ್ಪರ್ ಚಾಲಕ

ಶಂಕರಪುರ : ಕಾರ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ವೇಳೆ ಶಂಕರಪುರ ಸಮೀಪದ ಅರಸೀಕಟ್ಟೆ ದುರ್ಗಾ ನಗರದಲ್ಲಿ ನಡೆದಿದೆ.

ಮೃತ ಟಿಪ್ಪರ್ ಚಾಲಕನನ್ನು ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ಕ್ (55) ಎಂದು ಗುರುತಿಸಲಾಗಿದೆ. ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿದ್ದು, ಇದರ ಅಡಿಯಲ್ಲಿ ಸಿಲುಕಿದ ಚಾಲಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Related posts

ರಂಗನಪಲ್ಕೆಯ ಡಾ. ಬಿ. ಆರ್. ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

1 ಕೋಟಿ ಅನುದಾನದಲ್ಲಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ

ಬಸ್ಸು ಮಾಲಕರಿಂದ ಟೋಲ್ ಲೂಟಿ ವಿರುದ್ಧ ಪ್ರತಿಭಟನೆ