ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಯುವಕ ಗಂಭೀರ.!

ಮಂಗಳೂರು : ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ನೋರ್ವ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ನಾಡ್ ಬಳಿ ಈ ಅಪಘಾತ ಸಂಭವಿಸಿದ್ದು ಓಮ್ನಿ ವಾಹನಕ್ಕೆ ರಾಂಗ್ ಸೈಡ್ ನಿಂದ ಬಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಗಂಭೀರ ಗಾಯಗೊಂಡಿದ್ದಾನೆ.

ಕೊಲ್ನಾಡ್ ನಿವಾಸಿ ಫೋರಮ್ ಮಾಲ್‌ನಲ್ಲಿರುವ ಪೂರ್ವಿಕಾ ಮೊಬೈಲ್ ಶಾಪ್‌ನಲ್ಲಿ ಕೆಲಸದಲ್ಲಿರುವ ಮನೀಶ್(22) ಗಾಯಗೊಂಡವರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮನೀಶ್ ಅವರ ಕಾಲು, ಕೈ ತಲೆಯ ಭಾಗಕ್ಕೆ ಗಾಯಗಳಾಗಿದ್ದು ಸುರತ್ಕಲ್ ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !