ಚಲಿಸುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದು ಸವಾರ ಪ್ರವೀಣ್ ಮೃತ್ಯು

ಬೆಳ್ತಂಗಡಿ : ಚಲಿಸುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದು ಸವಾರನೊರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ಗೇರುಕಟ್ಟೆ ಜಾರಿಗೆಬೈಲು ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತ ಯುವಕನನ್ನು ಬೆಳಾಲು ಗ್ರಾಮದ ನಿವಾಸಿ ಪ್ರವೀಣ್‌ (25) ಎಂದು ಗುರುತಿಸಲಾಗಿದೆ.

ಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಜಾರಿಗೆ ಬೈಲು ಎಂಬಲ್ಲಿ ರಸ್ತೆಬದಿಯ ಮರದ ಗೆಲ್ಲು ಮುರಿದು ಅವರ ಬೈಕ್ ಮೇಲೆ ಬಿದ್ದಿದೆ.

ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Related posts

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ : ಪೊಲೀಸ್‌ ಕಮಿಷನರ್‌

ಕ್ಷಣಿಕ ಸಿಟ್ಟಿನಿಂದ ಮಹಿಳೆಗೆ ಥಳಿತ ಎಂದ ಮೀನುಗಾರರ ಸಂಘ – ನಾಳೆ ಪ್ರತಿಭಟನೆಗೆ ಕರೆ

ಆಯತಪ್ಪಿ ಬೋಟಿಗೆ ಬಿದ್ದ ಕಾರ್ಮಿಕ ಮೃತ್ಯು