ಬಳ್ಕೂರಿನಲ್ಲಿ ಮರ ಬಿದ್ದು ಎರಡು ಮನೆಗಳಿಗೆ ಸಂಪೂರ್ಣ ಹಾನಿ

ಕುಂದಾಪುರ : ಭಾರೀ ಗಾಳಿ-ಮಳೆಯಿಂದಾಗಿ ಮನೆಯೊಂದರ ಮೇಲೆ‌ ಮರ‌ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ತಾಲೂಕಿನ ಬಳ್ಕೂರಿನಲ್ಲಿ ನಡೆದಿದೆ.

ಬುಧವಾರ ರಾತ್ರಿ ಭಾರೀ‌ ಗಾಳಿ‌-ಮಳೆ ಬಂದ ಪರಿಣಾಮ ಹೆಮ್ಮಾಡಿ‌ ಗ್ರಾ.ಪಂ ವ್ಯಾಪ್ತಿಯ ಗುಂಡಿಕೊಡ್ಲು ಸೀತಾ ದೇವಾಡಿಗ ಅವರ ಮನೆಯ ಮೇಲೆ ಬೃಹತ್ ಗಾತ್ರದ ಮಾವಿನ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ.

ಮರ ಬಿದ್ದ ರಭಸಕ್ಕೆ ಮನೆಯ ಮಹಡಿ ಸಂಪೂರ್ಣ ಕುಸಿದ ಪರಿಣಾಮ ಮನೆಯೊಳಗೆ ಮಲಗಿದ್ದ ಸೀತಾ ದೇವಾಡಿಗ ಅವರ ಪತಿ ಶಂಕರ ದೇವಾಡಿಗ ಅವರ ತಲೆ‌ ಹಾಗೂ ಮೈಮೇಲೆ ಹೆಂಚು ಬಿದ್ದು ಗಾಯಗೊಂಡಿದ್ದಾರೆ. ಗಾಯಾಳು ಶಂಕರ ದೇವಾಡಿಗ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ