ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರ

ಮೂಡುಬಿದಿರೆ : ಮಂಗಳವಾರ ಸಂಜೆ ವೇಳೆಗೆ ಬೀಸಿದ ಬಿರುಗಾಳಿಯಿಂದಾಗಿ ಮೂಡುಬಿದಿರೆ – ಬಂಟ್ವಾಳ ರಾಜ್ಯ ಹೆದ್ದಾರಿ ಹಾದು ಹೋಗುವ ಬಿರಾವು ಗಾಜಿಗಾರ ಪಲ್ಕೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಮೇಲೆ ಮರ ಮುರಿದುಬಿದ್ದ ಘಟನೆ ನಡೆದಿದೆ.

ಘಟನೆಯಿಂದ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೆಲಕಾಲ ಬೀಸಿದ ಗಾಳಿಗೆ ಹಲವು ಮರಗಳು ವಿದ್ಯುತ್‌ ತಂತಿಗಳ ಮೇಲೆ ಬಿದ್ದು ಕಂಬಗಳು ನೆಲಕ್ಕಪ್ಪಳಿಸಿದ್ದು ಮಾರ್ಗದಲ್ಲಿ ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು.

ಅರಣ್ಯ ಇಲಾಖೆ, ಮೆಸ್ಕಾಂ ಹಾಗೂ ಪೊಲೀಸರು ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ