ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ಹೆಬ್ರಿ : ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ ಎಂಬವರು ಶುಕ್ರವಾರ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಜನಾನುರಾಗಿಯಾಗಿದ್ದ ಕುಸುಮಾ ಆಚಾರ್ಯ ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಕಾರ್ಯಕ್ರಮ, ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೆಬ್ರಿ ವಿಶ್ವಕರ್ಮ‌ ಮಹಿಳಾ ಮಂಡಳಿಯ ಸಕ್ರಿಯ ಸದಸ್ಯರು.
ಮೃತರು ದತ್ತು ಪುತ್ರಿಯನ್ನು ಅಗಲಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ