ಅಪಘಾತದ ಗಾಯಾಳುವನ್ನು ಸ್ಕೂಟಿಯಲ್ಲಿಯೇ ಆಸ್ಪತ್ರೆಗೆ ಸೇರಿಸಿದ ಮಹಿಳಾ ಪೊಲೀಸ್ – ಕಮಿಷನರ್ ಶ್ಲಾಘನೆ

ಮಂಗಳೂರು : ನಗರದಲ್ಲಿ ಮಂಗಳವಾರ ನಸುಕಿನ ವೇಳೆ ಸಂಭವಿಸಿರುವ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್‌ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.

ಮಂಗಳವಾರ ನಸುಕಿನ ವೇಳೆ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್‌ಅಪ್ ವಾಹನ ಹಾಗೂ ಕಂಟೈನರ್ ಲಾರಿಯ ಮಧ್ಯೆ ಅಪಘಾತ ಸಂಭವಿಸಿತ್ತು. ಲಾರಿಯ ಕ್ಲೀನ‌ರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸಬಲ್ ಮನ್ಶಿದಾ ಬಾನು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು ತನ್ನ ಸ್ಕೂಟಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವಿಚಾರವನ್ನು ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗ್ರವಾಲ್ ಕಮಿಷನರೇಟ್ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಾನ್ ಸ್ಟೇಬಲ್ ಮನ್ಶಿದಾ ಬಾನು ಅವರ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ