ಕಾಲೇಜಿನ ಯುವ ಉಪನ್ಯಾಸಕಿಗೆ ಮೆಟ್ಟಿಲಿನಿಂದ ಬಿದ್ದು ತಲೆಗೆ ಗಂಭೀರ ಗಾಯ – ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು

ಮಂಗಳೂರು : ನಗರದ ಅಲೋಶಿಯಸ್ ಪದವಿ ಕಾಲೇಜಿನ ಯುವ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ (23) ಕಾಲೇಜು ಮೆಟ್ಟಿಲಿನಿಂದ ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬಜ್ಪೆ ಪಡು ಪೆರಾರ ನಿವಾಸಿ ಗ್ಲೋರಿಯಾ ಆಶಾ ರೋಡ್ರಿಗಸ್ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿದ್ದರು‌. ಬಳಿಕ ಅಲೋಶಿಯಸ್ ಕಾಲೇಜಿನಲ್ಲಿಯೇ ಬಿಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿ ಸೇರ್ಪಡೆಗೊಂಡಿದ್ದರು. ನ.9ರಂದು ಕಾಲೇಜಿನಲ್ಲಿ ಮೆಟ್ಟಲು ಇಳಿಯುತ್ತಿದ್ದಾಗ ತಲೆಸುತ್ತು ಬಂದು ಬಿದ್ದ ಅವರ ತಲೆಗೆ ಗಂಭೀರವಾದ ಗಾಯವಾಗಿತ್ತು. ತಕ್ಷಣ ಅವರನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸೇರಿಸಲಾಗಿತ್ತು.

ಕೋಮಾ ಸ್ಥಿತಿಯಲ್ಲಿದ್ದ ಗ್ಲೋರಿಯಾ ಅವರು ನ.13ರ ಬುಧವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಅವರಿಗೆ ಫುಡ್ ಅಲರ್ಜಿಯಾಗಿ ಈ ರೀತಿ ಆಗಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಅನಾಫೆಲಾಕ್ಟಿಕ್ ರಿಯಾಕ್ಷನ್ ಎಂದು ಹೇಳಲಾಗುತ್ತದೆ ಎಂದು ತಿಳಿದು ಬಂದಿದೆ. ಈ ದುಃಖಕರ ಸ್ಥಿತಿಯ ನಡುವೆಯೂ ಮನೆಯವರು ಅವರ ದೇಹದ ಅಂಗಾಂಗ ದಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ‌. ಗ್ಲೋರಿಯಾ ಅವರ ಅಂತ್ಯಕ್ರಿಯೆ ನ.14ರ ಮಧ್ಯಾಹ್ನ ಬಜ್ಪೆಯ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಡೆಯಲಿದೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ