ಪ್ರೀತಿ ಮಾಡಿದ ಹುಡುಗಿ ಕೈ ಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ

ಮಂಗಳೂರು : ಪ್ರೀತಿ ಮಾಡಿದ ಹುಡುಗಿ ಕೈಕೊಟ್ಟಿದ್ದರಿಂದ ಆಘಾತಕ್ಕೊಳಗಾದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ತಾರೆಮಾ‌ರ್ ಅರ್ಭಿ ಎಂಬಲ್ಲಿ ಸೋಮವಾರ ನಡೆದಿದೆ.

ಚಂದ್ರಶೇಖರ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೇಸ್ತ್ರಿ ಕೆಲಸ ಮಾಡುತ್ತಿರುವ ಚಂದ್ರಶೇಖರ ಹಲವು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆಕೆ ದೂರವಾಗಲು ಯತ್ನಿಸಿದಾಗ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈತ ಎಂದಿನಂತೆ ಕೆಲಸ ಮುಗಿಸಿ ಶನಿವಾರ ಮನೆಗೆ ಬಂದು ಅಕ್ಕನ ಮಕ್ಕಳಿಗೆ ತಿಂಡಿ ಕೊಟ್ಟು ಮತ್ತೆ ಹೋದಾತ ಮತ್ತೆ ಸ್ನೇಹಿತನಿಗೆ ವಾಯ್ಸ್ ಮೆಸೇಜ್ ಹಾಕಿ (ಬೆಳಗ್ಗೆ 5.30) ಬೈಕ್ ಇರುವ ಜಾಗ ತಿಳಿಸಿ ಅದನ್ನು ಕೊಂಡೊಯ್ಯು‌ವಂತೆ ತಿಳಿಸಿದ್ದನು. ಆತ ಸೂಚಿಸಿದ್ದ ಸ್ಥಳಕ್ಕೆ ಆಗಮಿಸಿದಾಗ ಚಂದ್ರ‌ಶೇಖರ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ‌ರುವುದು ಬೆಳಕಿಗೆ ಬಂದಿದೆ.

‌ತನ್ನ ನಿರ್ಧಾರಕ್ಕೆ ತಾನು ಪ್ರೀತಿಸಿದ್ದ ಯುವತಿಯೇ ಕಾರಣ ಎಂದು ಡೆತ್‌ನೋಟ್ ಬರೆದಿದ್ದು ಆಕೆಯ ಹೆಸರು ಮೊಬೈಲ್ ನಂಬರ್ ಬರೆದಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!