ಸಾಲಬಾಧೆಯಿಂದ ಮನನೊಂದು ಯುವಕ ಆತ್ಮಹತ್ಯೆ

ಪಡುಬಿದ್ರೆ : ಸಾಲದ ಚಿಂತೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಸಂಭವಿಸಿದೆ.

ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಇವರಿಗೆ ಸಾಲದ ಚಿಂತೆಯಿತ್ತೆನ್ನಲಾಗಿದೆ.

ಮನೆಯಲ್ಲಿದ್ದ ಸಮಯದಲ್ಲಿ ಸಾಲ ಕೊಟ್ಟ ಬ್ಯಾಂಕ್‌ನವರು, ಸಾಲದವರು ಯುವಕನ ಮನೆಗೆ ಬಂದು ಹೋಗುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು. ಬೆಡ್ ರೂಂನಲ್ಲಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ