ಕುಂದಾಪುರ : ಕೋಟೇಶ್ವರ ಹಳೆ ಅಳಿವೆ ಬಳಿ ಯುವಕನೊಬ್ಬ ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಯುವಕ ಬೀಜಾಡಿ ಪೆಟ್ಟಿ ಮನೆ ಕುಮಾರ್ ಅವರ ಪುತ್ರ ಮೇಘರಾಜ್ (24) ಎಂದು ತಿಳಿದುಬಂದಿದೆ. ಅವರು ಹಳೆ ಅಳಿವೆ ಬಳಿ ಸಮುದ್ರದಲ್ಲಿ ಮರಣಬಲೆ ಬಿಡಲು ಹೋದ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ನೀರುಪಾಲಾಗಿದ್ದಾರೆ. ಬಳಿಕ ಬೀಜಾಡಿ ಸಮೀಪ ಕಡಲಲ್ಲಿ ಮೃತದೇಹ ದಡ ಸೇರಿದೆ.
ಸ್ಥಳಕ್ಕಾಗಮಿಸಿದ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಕುಂದಾಪುರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.