ಪತ್ನಿ ಹಾಗೂ ಮಗುವನ್ನು ಹತ್ಯೆ ಮಾಡಿ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಯುವಕ

ಮಂಗಳೂರು : ಪತ್ನಿ ಹಾಗೂ ಮಗುವನ್ನು ಹತ್ಯೆ ಮಾಡಿದ ಯುವಕನೊಬ್ಬ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರ ಹೊರವಲಯದ ಮುಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ.

ಪಕ್ಷಿಕೆರೆಯ ಜಲಜಾಕ್ಷಿ ರೆಸಿಡೆನ್ಸಿ ನಿವಾಸಿ ಕಾರ್ತಿಕ್ ಭಟ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ಪತ್ನಿ ಪ್ರಿಯಾಂಕಾ(28) ಹಾಗೂ ಹೃದಯ್(4) ಹತ್ಯೆಯಾದ ದುರ್ದೈವಿಗಳು.

ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿನ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಯುವಕನೊಬ್ಬ ಮುಲ್ಕಿಯ ಬೆಳಾಯರುನಲ್ಲಿ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡವರು ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದು ಬಂದಿ‌ತ್ತು.‌ ಮನೆಗೆ ಬಂದು ನೋಡಿದಾಗ ಅವರ ಪತ್ನಿ – ಮಗು ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಮಂಗಳೂರು ಎಸಿಪಿ ಶ್ರೀಕಾಂತ್, ಮುಲ್ಕಿ ಪೊಲೀಸ್‌ ಇನ್ಸ್‌ಪೆಕ್ಟ‌ರ್ ವಿದ್ಯಾಧರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!