ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರಪಾಲು

ಸುರತ್ಕಲ್ : ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ‌.

ನೀರು ಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21)ಎಂದು ಗುರುತಿಸಲಾಗಿದೆ.

ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ಮಂಗಳವಾರ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ