ಕೆಲಸಕ್ಕೆಂದು ಹೋದ ಯುವಕ ಮರಳಿ ಬಾರದೇ ನಾಪತ್ತೆ

ಉಡುಪಿ : ಕೆಲಸಕ್ಕೆಂದು ಮನೆಯಿಂದ ಹೋದ ಯುವಕ ಮರಳಿ ಬಾರದೇ ನಾಪತ್ತೆಯಾದ ಘಟನೆ ನಡೆದಿದೆ.

ಉಡುಪಿ ತಾಲೂಕು ಮೂಡುಬೆಳ್ಳೆಯ ಮಡಿಕೆಟ್ಟು ತಿರ್ಲಪಕ್ಕೆ ನಿವಾಸಿ ಜಯಪ್ರಕಾಶ್ (26) ಎಂಬ ಯುವಕ ಫೆ.27ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ಮರಳಿ ಬಾರದೇ ನಾಪತ್ತೆಯಾಗಿದ್ದಾರೆ.

ಇವರು 175 ಸೆ.ಮೀ. ಎತ್ತರ, ಸಾದಾರಣ ಮೈಕಟ್ಟು, ಎಣ್ಣೆ ಕಪ್ಪು, ದುಂಡು ಮುಖ ಹೊಂದಿದ್ದು ಹಿಂದಿ, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

Related posts

60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರೊಂದಿಗೆ ರಂಗಾಸಕ್ತರ ಸಂವಾದ