ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬಂಟ್ವಾಳ : ವ್ಯಕ್ತಿಯೋರ್ವ ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಿ.ಸಿ ರೋಡ್‌ನ ಅಜ್ಜಿಬೆಟ್ಟುವಿನಲ್ಲಿ ನಡೆದಿದೆ.

ಮನೆಯಲ್ಲಿ‌ ಏಕಾಂಗಿಯಾಗಿ ವಾಸವಿರುವ ಬಿ.ಕುಮಾರ್ ಎಂಬ ಬ್ಯಕ್ತಿ ಶನಿವಾರ ರಾತ್ರಿ ಸ್ನಾನಕ್ಕೆಂದು ಬಚ್ಚಲು ಮನೆಯಲ್ಲಿ ಹೋದಾಗ ಹಠಾತ್ತನೆ ಕುಸಿದು ಬಿದ್ದು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.

ಮನೆಯೊಳಗಿಂದ ದುರ್ವಾಸನೆ ಬೀರುತ್ತಿದ್ದು, ಅನುಮಾನಗೊಂಡು ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ್ದರು. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕಾಗಮಿಸಿ ಎದುರಿನ ಬಾಗಿಲು ಮುರಿದು ಒಳಪ್ರವೇಶಿಸಿದಾಗ ಬಚ್ಚಲು ಮನೆಯಲ್ಲಿ ಕೊಳೆತ ಸ್ಥಿತಿ ಮೃತದೇಹ ಕಂಡುಬಂದಿದೆ. ಬಳಿಕ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಬಂಟ್ಚಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ