ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಕೊಣಾಜೆಯ ಮಂಗಳೂರು ವಿವಿಯ ಮುಂಭಾಗ ಎಬಿವಿಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಡಳಿತ ಸೌಧ ನುಗ್ಗಲೆತ್ನಿಸಿದ ವೇಳೆ ಆಡಳಿತ ಸೌಧದ ಮುಂಭಾಗದ ಬಾಗಿಲಿನ ಗಾಜು ಪುಡಿಯಾದ ಘಟನೆ ನಡೆದಿದೆ. ಈ ವೇಳೆ ಗಾಜು ತಾಗಿ ಓರ್ವ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯವಾಗಿದೆ.

ಆಡಳಿತ ಸೌಧದ ಮುಂಭಾಗ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಂಗಳೂರು ವಿವಿ ಉಪಕುಲಪತಿ ಪ್ರೊ.ಪಿ.ಎಲ್.ಧರ್ಮರವರು ಗಾಜು ಪುಡಿ ಮಾಡಿ ಪ್ರತಿಭಟನೆ ನಡೆಸಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಪ್ರತಿಭಟನೆ ನಿಮ್ಮ ಹಕ್ಕು, ಆದರೆ ತಮಗೆ ಪ್ರತಿಭಟನೆಗೆ ಅವಕಾಶ ನೀಡಿದ್ದರೂ ಈ ರೀತಿಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಳಿಕ ಉಪಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಿದರು. ಬಳಿಕ ಉಪಕುಲಪತಿಯವರ ಧರ್ಮ ಅವರ ಮನವೊಲಿಕೆಗೆ ಮನವೊಲಿಯದ ವಿದ್ಯಾರ್ಥಿಗಳು ವಿವಿ ವಿರುದ್ಧ, ಉಪಕುಲಪತಿಯವರ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಸಮಸ್ಯೆಗಳು ಬಗೆಹರಿಯುವ ಬಗ್ಗೆ ಸರಿಯಾದ ಭರವಸೆ ದೊರಕುವವರೆಗೆ ತಾವು ಸ್ಥಳದಿಂದ ತೆರಳುವುದಿಲ್ಲ ಆಗ್ರಹಿಸಿದ್ದಾರೆ.

ಈ ವೇಳೆ ಸಿಂಡಿಕೇಟ್ ಸದಸ್ಯ ಮಾದೇಶ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಏನೋ ಹೇಳಲು ಹೊರಟಿದ್ದರು‌. ಆಗ ಮಧ್ಯಪ್ರವೇಶಿಸಿದ ಉಪಕುಲಪತಿಯವರು “ಮಿಸ್ಟರ್ ಸಿಂಡಿಕೇಟ್ ಸದಸ್ಯರೇ ತಾವು ಮಾತನಾಡಬಾರದು” ಎಂದು ತಡೆದಿದ್ದಾರೆ. ಬಳಿಕ ಅಲ್ಲಿಂದ ತೆರಳಿದ್ದಾರೆ‌. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಮತ್ತೆ ಉಪಕುಲಪತಿ ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದ್ದಾರೆ. ಆದ್ದರಿಂದ ಮತ್ತೆ ಸ್ಥಳಕ್ಕೆ ಬಂದ ಉಪಕುಲಪತಿಯವರು ವಿದ್ಯಾರ್ಥಿಗಳ ಬೇಡಿಕೆಯನ್ನು ಸಿಂಡಿಕೇಟ್ ಸಭೆಯಲ್ಲಿಟ್ಟು, ಸರಕಾರದ ಗಮನಕ್ಕೆ ತರಲಾಗುತ್ತದೆ ಎಂದು ಉಪಕುಲಪತಿ ವಿದ್ಯಾರ್ಥಿಗಳ ಮನವೊಲಿಸಿದ್ದಾರೆ. ತಮ್ಮ ಎಲ್ಲಾ ಸಮಸ್ಯೆಗಳನ್ನು ತಿಂಗಳೊಳಗೆ ಬಗೆಹರಿಸಬೇಕು ಎಂದು ವಿದ್ಯಾರ್ಥಿಗಳು ಕೇಳಿಕೊಂಡಿದ್ದು, ಬಗೆಹರಿಯದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ