ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕಿನ್ನಿಗೋಳಿ : ಉಭಯ ತಿಟ್ಟುಗಳ ಖ್ಯಾತ ಹಾಸ್ಯಗಾರರಾದ ಕಿನ್ನಿಗೋಳಿ ಮುಖ್ಯಪ್ರಾಣ (84) ನಿನ್ನೆ ನಿಧನರಾದರು. ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಮುಖ್ಯಪ್ರಾಣ ಕಿನ್ನಿಗೋಳಿ ಕಟೀಲು, ಮಂದಾರ್ತಿ, ಸಾಲಿಗ್ರಾಮ, ಪೆರ್ಡೂರು, ಕುಮಟಾ, ಇರಾ, ಕದ್ರಿ, ಸುಬ್ರಹ್ಮಣ್ಯ, ಮಂತ್ರಾಲಯ ಹೀಗೆ ವಿವಿಧ ಮೇಳಗಳಲ್ಲಿ 58 ವರ್ಷಗಳ ಕಾಲ ನಿರಂತರವಾಗಿ ಕಲಾಸೇವೆಗೈದ ಅಪೂರ್ವ, ಪ್ರತಿಭಾವಂತ ಹಾಸ್ಯ ಕಲಾವಿದರಾಗಿದ್ದರು.

ರಾಜ್ಯೋತ್ಸವ ಸಹಿತ ನೂರಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಕಳೆದ 25 ವರ್ಷಗಳಿಂದಲೂ ಯಕ್ಷನಿಧಿ ಸಮಾವೇಶದಲ್ಲಿ ಸಂತಸದಿಂದ ಪಾಲ್ಗೊಳ್ಳುತ್ತಿದ್ದ ಇವರು, ಈ ಬಾರಿ ಅನಾರೋಗ್ಯದ ಹಿನ್ನೆಲೆಯಲ್ಲಿ ಭಾಗವಹಿಸಿರಲಿಲ್ಲ.

ಪತ್ನಿ, ಪುತ್ರ ಹಾಗೂ ಅಪಾರ ಸಂಖ್ಯೆಯ ಕಲಾಭಿಮಾನಿಗಳನ್ನು ಅಗಲಿದ ಇವರ ನಿಧನದಿಂದ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ಕುಟುಂಬ ಬಳಗದವರಿಗೆ ನೀಡಲೆಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.ತಲ್ಲೂರು ಶಿವರಾಮ ಶೆಟ್ಟಿಯವರು ಹಾಗೂ ಅಕಾಡೆಮಿಯ ಸರ್ವ ಸದಸ್ಯರು ಸಂತಾಪ ಸೂಚಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ