ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ : ಸವಾರ ಬಲಿ

ಮೂಡುಬಿದಿರೆ : ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದ ಪರಿಣಾಮ ದ್ವಿಚಕ್ರ ವಾಹನ ಸವಾರ ಬಲಿಯಾದ ಘಟನೆ ಕೋಟೆಬಾಗಿಲು ಬಳಿ ಸೋಮವಾರ ನಡೆದಿದೆ.

ಮೃತ ದುರ್ದೈವಿಯನ್ನು ದ್ವಿಚಕ್ರ ವಾಹನ ಸವಾರ ಮರಿಯಾಡಿ ನಿವಾಸಿ ಅಹ್ಮದ್‌ ಬಾವ (50) ಎಂದು ಗುರುತಿಸಲಾಗಿದೆ.

ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಕಾರೊಂದು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಇದರ ಪರಿಣಾಮ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಅಹ್ಮದ್‌ ಬಾವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿನ್ನೆ ಸಂಜೆ ವೇಳೆ ಮೃತಪಟ್ಟಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ