ಉಡುಪಿ : ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಂಬಲಪಾಡಿ ರಾಷ್ಟೀಯ ಹೆದ್ದಾರಿ 66ರಲ್ಲಿ ಗುರುವಾರ ನಡೆದಿದೆ.
ಗಾಯಗೊಂಡವರನ್ನು ಪಡುಬಿದ್ರೆ ನಿವಾಸಿಗಳಾದ ನಿಕಿಲ್ ಹಾಗೂ ಸಂದೀಪ್ ಎಂದು ಗುರುತಿಸಲಾಗಿದೆ. ಸವಾರ ನಿಕಿಲ್ ಗಂಭೀರವಾಗಿ ಗಾಯಗೊಂಡಿದ್ದು, ಸಹ ಸವಾರ ಸಂದೀಪ್ ಅವರಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜ ಸೇವಕ ವಿಶು ಶೆಟ್ಟಿ ಅವರು, ತನ್ನ ಜೀಪಿನಲ್ಲಿ ಗಾಯಾಳುಗಳನ್ನು ಕರೆದೊಯ್ದು ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

