ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ : ಸ್ಥಳೀಯ ಯುವಕರ ಕಾರ್ಯಾಚರಣೆ‌ಯಿಂದ ತಪ್ಪಿದ ಭಾರೀ ಅನಾಹುತ…!

ಉಪ್ಪಿನಂಗಡಿ : ಕೆಎಸ್ಆರ್‌‌ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಇಂದು ಬೆಳಗ್ಗೆ ನಡೆದಿದೆ.

ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದರು.

ಕೂಡಲೇ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ತಕ್ಷಣ ಅಲ್ಲಿದ್ದ ಅಟೋ ಚಾಲಕರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಬಸ್ಸಿನ ಹಿಂಬದಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ