ಮದುವೆಯಾಗುವುದಾಗಿ ನಂಬಿಸಿ ಮೋಸ ಪ್ರಕರಣ; ಆರೋಪಿ ಖುಲಾಸೆ

ಉಡುಪಿ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಕೊನೆಗೆ ಮೋಸ ಮಾಡಿದ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ಕಿನ್ನಿಗೋಳಿಯ ನಿವಾಸಿ, ಖಾಸಗಿ ಬಸ್ ಚಾಲಕ ಅವಿಲ್ ಸುಧೀರ್ ಕೊರೆಯಾ ಎಂಬಾತ ಕಾರ್ಕಳದಲ್ಲಿ ನರ್ಸ್ ವೃತ್ತಿ ಮಾಡಿಕೊಂಡಿದ್ದ ಯುವತಿಯನ್ನು ಪ್ರೀತಿಸುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಉಡುಪಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿದ್ದು, ಪೊಲೀಸರು ಸಲ್ಲಿಸಿದ ಆರೋಪ ಪಟ್ಟಿಯಂತೆ ವಿಚಾರಣೆ ನಡೆದು ಆರೋಪಿಯು ನೊಂದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿಲ್ಲ. ಇದೊಂದು ಸಮ್ಮತಿಯ ಲೈಂಗಿಕ ಸಂಪರ್ಕ ಪ್ರಕರಣವಾಗಿದೆ ಎಂದು ಮನಗಂಡು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ (ಪೋಕ್ಸೋ) ಶ್ರೀನಿವಾಸ ಸುವರ್ಣ ಅವರು ಆರೋಪಿಯನ್ನು ಎಲ್ಲ ಆರೋಪಗಳಿಂದ ಮುಕ್ತಗೊಳಿಸಿ ಆದೇಶಿಸಿದ್ದಾರೆ.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ