ಪೊಕ್ಸೊ ಪ್ರಕರಣದ ಆರೋಪಿ ಖುಲಾಸೆ

ಮಂಗಳೂರು : ಅಪ್ರಾಪ್ತೆಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಮೇಲಿನ ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಂಗಳೂರಿನ 2ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶಿಸಿದೆ.

ಆರೋಪಿ ಕಿರಣ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದ. 2023ರ ಜೂನ್ 13ರಂದು ಬೆಳಗ್ಗೆ ಬಜ್ಪೆ ಬಸ್ಸು ನಿಲ್ದಾಣದ ಬಳಿ ಕರೆಸಿಕೊಂಡಿದ್ದಾನೆ. ಅಲ್ಲಿ ಬಾಲಕಿಯನ್ನು ಪುಸಲಾಯಿಸಿ ಮಂಗಳೂರಿನ ಹೊರವಲಯದ ಮೂಡುಪೆರಾರ ಗ್ರಾಮದ ಅರ್ಕೆಪದವು ಎಂಬಲ್ಲಿರುವ ಮನೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ 3 ದಿನಗಳ ಕಾಲ ಜೊತೆಯಲ್ಲಿರಿಸಿಕೊಂಡು ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಆರೋಪಿ ವಿರುದ್ಧ ನೀಡಿರುವ ದೂರಿನನ್ವಯ ಬಜ್ಪೆ ಪೊಲೀಸರು ಅತ್ಯಾಚಾರ ಮತ್ತು ಪೊಕ್ಸೊ ಕಾಯ್ದೆಯಂತೆ ಪ್ರಕರಣ ದಾಖಲಿಸಿದ್ದರು.

ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಜಿಲ್ಲಾ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಸಾಕ್ಷಿದಾರರನ್ನು ವಿಚಾರಣೆ ಮಾಡಿ ವಾದ-ವಿವಾದಗಳನ್ನು ಆಲಿಸಿ ನ್ಯಾಯಾಧೀಶ ಮನು ಕೆ.ಯವರು ಆರೋಪಿಯ ವಿರುದ್ಧ ಕೇಸನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ.‌‌ ಆದ್ದರಿಂದ ಆರೋಪಿಯನ್ನು ಕೇಸಿನಿಂದ ಖುಲಾಸೆಗೊಳಿಸಿ ಬಿಡುಗಡೆ ಮಾಡಿ‌ ಆದೇಶಿಸಿದ್ದಾರೆ.

ಆರೋಪಿಯ ಪರವಾಗಿ ಜಿ.ವಾಸುದೇವ ಗೌಡ ಮುಖ್ಯ ಕಾನೂನು ನೆರವು ಅಭಿರಕ್ಷಕರು ವಾದಿಸಿದ್ದಾರೆ.

Related posts

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ