ಮನೆಗೆ ನುಗ್ಗಿ ಕಳವುಗೈದ ಆರೋಪಿ ಅರೆಸ್ಟ್

ಸುರತ್ಕಲ್ : ಮನೆಗೆ ನುಗ್ಗಿ ಸಾವಿರಾರು ಮೌಲ್ಯದ ಸೊತ್ತುಗಳನ್ನು ಕಳವುಗೈದ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಟಿಪಳ್ಳ ನಿವಾಸಿ ಮಹಮ್ಮದ್ ಅಶ್ರಫ್ @ ಚೋಟಾ ಅಶ್ರಫ್ @ ಖಲೀಫಾ(26) ಬಂಧಿತ ಆರೋಪಿ

ದೂರುದಾರರು ವಾಸಿಸುತ್ತಿದ್ದ ಬಾಡಿಗೆ ರೂಮ್‌ಗೆ ಜೂನ್ 14ರಂದು ನುಗ್ಗಿ ಮೊಬೈಲ್‌ಗಳ ಸಹಿತ ಹಣವನ್ನು ಕಳ್ಳತನ ಮಾಡಿದ್ದಾನೆ. ಒಟ್ಟು 38,500 ರೂಪಾಯಿಗಳ ಸೊತ್ತುಗಳನ್ನು ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ತಂಡ ಆರೋಪಿಯ ಬಗ್ಗೆ ಸಿ.ಸಿ ಫೂಟೇಜ್ ಹಾಗೂ ತಾಂತ್ರಿಕ ಮಾಹಿತಿಗಳಿಂದ ದಿನಾಂಕ 24-06- 2024‌ರಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಡಂಬೈಲು ಬಸ್‌ಸ್ಟಾಂಡ್ ಬಳಿ ಆರೋಪಿ ಮಹಮ್ಮದ್ ಅಶ್ರಫ್‌ನನ್ನು ಬಂಧಿಸಿದ್ದಾರೆ.

ಆರೋಪಿಯಿಂದ ಒಪ್ಪೋ ಕಂಪನಿಯ ಎರಡು ಮೊಬೈಲ್ ಫೋನ್ ಮತ್ತು ಒಂದು ಎಂಐ ಕಂಪನಿಯ ಮೊಬೈಲ್ ಫೋನ್ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಈ ಹಿಂದೆಯೂ ಪ್ರಕರಣಗಳು ದಾಖಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!