ಆರೋಪಿ ಕಾಲಿಗೆ ಗುಂಡೇಟು ಪ್ರಕರಣ – ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಣಿಪಾಲ : ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಆರೋಪಿ ಇಸಾಕ್ ಕಾಲಿಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಸಾಕ್‌ನನ್ನು ಸರ್ಜರಿಗಾಗಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಸಾಕ್ ಜೊತೆ ಇದ್ದ ಇತರ ಆರೋಪಿಗಳಾದ ರಾಹಿದ್(25), ಸಾಮಿಲ್ (26), ನಿಜಾಮುದ್ದೀನ್(26) ಇವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ನೀಡಿದೆ.

ಘಟನೆ ನಡೆದ ಸ್ಥಳದಲ್ಲಿ ಸ್ಥಳ ಮಹಜರು ನಡೆಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related posts

ಮೀನು ಸಾಗಾಟದ ಲಾರಿಗೆ ದುಷ್ಕರ್ಮಿಗಳಿಂದ ಕಲ್ಲು- ದೂರು ದಾಖಲು

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ – ಜಿಲ್ಲಾಧಿಕಾರಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್‌ಪಾಲ್ ಸುವರ್ಣ ಅಭಿನಂದನೆ