ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಬಂಧನ‌ – ಗಾಂಜಾ ವಶ

ಉಡುಪಿ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್‌ ಜಬ್ಬಾರ್‌ ಬಂಧಿತ ಆರೋಪಿ.

ಪೆರಂಪಳ್ಳಿಯ ಬಳಿ ಆರೋಪಿಯು ಸ್ಕೂಟರ್‌ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಬೆನ್ನಿಗೆ ಹಾಕುವ ಚೀಲದಲ್ಲಿ ಮಾರಾಟ ಮಾಡಲು ನಿಂತಿದ್ದ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 2.344 ಕೆ.ಜಿ. ತೂಕದ ಗಾಂಜಾ, ಮೊಬೈಲ್‌ ಪೋನ್‌, ಗಾಂಜಾವನ್ನು ಸಾಗಾಟ ಮಾಡಲು ಬಳಸಿದ್ದ ಬ್ಯಾಗ್‌, ಪ್ಲಾಸ್ಟಿಕ್‌ ಕವರ್‌, ತೂಕದ ಯಂತ್ರ, ಚೂರಿ, 5810 ರೂ. ಮತ್ತು ಗಾಂಜಾ ಸಾಗಾಟಕ್ಕೆ ಬಳಸಿರುವ ಸ್ಕೂಟರ್‌ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯು ಅಕ್ರಮ್‌ ಭಟ್ಕಳ ಎಂಬಾತನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ