ಹೊಡೆದಾಟ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಮಲ್ಪೆ : ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಹೊಡೆದಾಟಕ್ಕೆ ಸಂಬಂಧಿಸಿದ ಪ್ರಕರಣ ಒಂದರಲ್ಲಿ ಉಡುಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಶಿಕಾಂತ ಬಂಧಿತ ಆರೋಪಿ. ಮಲ್ಪೆ ಪೊಲೀಸ್‌ ವೃತ್ತ ನಿರೀಕ್ಷಕ ಮತ್ತು ಪೊಲೀಸ್‌ ಉಪನಿರೀಕ್ಷಕರ ಮಾರ್ಗದರ್ಶನದಲ್ಲಿ ಠಾಣಾ ಹೆಡ್‌ ಕಾನ್‌ಸ್ಟೆಬಲ್‌ ವಿಶ್ವನಾಥ್‌ ಮತ್ತು ಸುರೇಶ ಕುಮಾರ್‌ ಅವರು ಆರೋಪಿಯನ್ನು ಉಡುಪಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯವು ಜನವರಿ 20ರ ವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ