12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!

ಬಂಟ್ವಾಳ : 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾವಳಪಡೂರು ಗ್ರಾಮದ ನಿವಾಸಿ ಮೊಹಮ್ಮದ್ ಅನ್ಸಾರ್ ಬಂಧಿತ ಆರೋಪಿ.

ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್. ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಶಿವಕುಮಾರ್ ಹಾಗೂ ಪಿಎಸ್‌ಐಗಳಾದ ಹರೀಶ್ ಎಂ.ಆರ್. ಮೂರ್ತಿ, ಲೋಲಾಕ್ಷ ಅವರ ನೇತೃತ್ವದಲ್ಲಿ ಹೆಡ್‌ಕಾನ್ಸ್ಟೆಬಲ್ ಗಣೇಶ್‌ಪ್ರಸಾದ್, ಕಾನ್ಸ್ಟೆಬಲ್‌ಗಳಾದ ಪ್ರವೀಣ್, ಶಿದ್ದಪ್ಪ, ಶಿವಾನಂದ ಮಡ್ಡಿ, ನಾಗರಾಜ್ ಅವರು ಆರೋಪಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ. ಬಳಿಕ ಆತನನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ