ನಿವೇಶನರಹಿತ ಅರ್ಹರಿಗೆ ಹಕ್ಕುಪತ್ರ ವಿತರಿಸಲು ಕ್ರಮ : ಜಿಲ್ಲಾಧಿಕಾರಿ

ಉಡುಪಿ : ಜಿಲ್ಲೆಯ ನಿವೇಶನ ರಹಿತ ಅರ್ಹ ಫ‌ಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ. ನ ಡಾ| ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಜರಗಿದ ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾ. ಪಂ. ವ್ಯಾಪ್ತಿಯಲ್ಲಿ ವಾಸವಿರುವ ವಸತಿ ಹಾಗೂ ನಿವೇಶನ ರಹಿತ ಫ‌ಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಅರ್ಹರನ್ನು ಗುರುತಿಸಿ, ಈಗಾಗಲೇ ಲಭ್ಯವಿರುವ ನಿವೇಶನಗಳ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ಗ್ರಾ.ಪಂ.ಗಳಲ್ಲಿ ನಿವೇಶನ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಯಿರುವ ಗ್ರಾಮಗಳಲ್ಲಿ ನಿವೇಶನ ವಿತರಿಸಲು ಅಗತ್ಯ ವಿರುವ ಜಮೀನು ಗುರುತಿಸುವ ಕಾರ್ಯ‌ವನ್ನು ತಹಶೀಲ್ದಾರರು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ಸಮನ್ವಯ‌ದೊಂದಿಗೆ ಮಾಡಬೇಕು ಎಂದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ