ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಕಲ್ಜಿಗ ಸಿನಿಮಾ ವೀಕ್ಷಿಸಿ ಮೆಚ್ಚುಗೆ

ಮಂಗಳೂರು : ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ನಟ ರಿಷಬ್ ಶೆಟ್ಟಿ ಥಿಯೇಟರ್‌ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಂತಾರ ಸಿನಿಮಾ ಖ್ಯಾತಿಯ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ ಕುಟುಂಬವೊಂದು ಕೊರಗಜ್ಜನನ್ನು ಆರಾಧಿಸಿಕೊಂಡು ಬರುವ ಕತೆ, ಮತ್ತು ಕುಟುಂಬ ಸಂಕಷ್ಟಕ್ಕೆ ಸಿಲುಕಿದಾಗ ಕುಟುಂಬದ ಬೆನ್ನಿಗೆ ನಿಲ್ಲುವ ಕೊರಗಜ್ಜ, ಅಧರ್ಮದಲ್ಲಿ ನಡೆಯುವವರನ್ನು ಶಿಕ್ಷಿಸುವ ಕಥೆ ರಿಷಬ್ ಶೆಟ್ಟಿ ಅವರಿಗೆ ತುಂಬಾ ಇಷ್ಟವಾಯಿತು. ಸಿನಿಮಾದ ಕ್ಯಾಮರಾ ವಕ್೯, ಹಿನ್ನಲೆ ಸಂಗೀತವನ್ನು ರಿಷಬ್ ಮೆಚ್ಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಗತಿ ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಶನಿಲ್ ಗುರು, ನಟ ಅರ್ಜುನ್ ಕಾಪಿಕಾಡ್, ನಿರ್ಮಾಪಕ ಶರತ್ ಕುಮಾರ್, ನಿರ್ದೇಶಕ ಸುಮನ್ ಸುವರ್ಣ, ಸಿನಿಮಾ ವಿತರಕ ಸಚಿನ್ ಉಪ್ಪಿನಂಗಡಿ, ಶ್ಲಾಘ ಸಾಲಿಗ್ರಾಮ ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ