ನಟ ಉಪೇಂದ್ರ ಆನೆಗುಡ್ಡೆ ಗಣಪತಿ ದೇವಸ್ಥಾನದಲ್ಲಿ ಪೂಜೆ, ಹುಟ್ಟೂರಲ್ಲಿ ಮೂಲ ನಾಗದರ್ಶನ

ಬ್ರಹ್ಮಾವರ : ಚಿತ್ರನಟ, ನಿರ್ದೇಶಕ ಉಪೇಂದ್ರ ತನ್ನ ಯು-ಐ ಚಿತ್ರದ ಯಶಸ್ಸಿನ ಬಳಿಕ ತನ್ನ ಹುಟ್ಟೂರು ಕುಂದಾಪುರದ ಪ್ರವಾಸ ಕೈಗೊಂಡಿದ್ದಾರೆ. ಕುಂದಾಪುರದಲ್ಲಿ ತನ್ನ ಮೂಲ ನಾಗನ ದರ್ಶನ ಕೈಗೊಂಡು ಬಳಿಕ ಆನೆಗುಡ್ಡೆಯ ಶ್ರೀ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಿದ್ದಾರೆ.

ಬಳಿಕ ಸಾಲಿಗ್ರಾಮ ದೇವಸ್ಥಾನಕ್ಕೆ ಭೇಟಿ ನೀಡಿ, ತಮ್ಮ ಕುಲದೇವರಾದ ಶ್ರೀ ಗುರು ನರಸಿಂಹ ದೇವರಿಗೆ ಪೂಜೆಯನ್ನು ಸಲ್ಲಿಸಿದರು.
ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ ಕೆ. ಎಸ್ ಕಾರಂತರು ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು. ಜೊತೆಗೆ ದೇವಸ್ಥಾನದ ಇತಿಹಾಸವನ್ನು ಉಪೇಂದ್ರ‌ಗೆ ತಿಳಿಸಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ