ಟೋಲ್‌ಗಳಲ್ಲಿ ಹೆಚ್ಚುವರಿ ದರ ಕಡಿತ : ಬಸ್‌ ಮಾಲಕರಿಂದ ಮೌನ ಪ್ರತಿಭಟನೆಗೆ ನಿರ್ಧಾರ

ಉಡುಪಿ : ಟೋಲ್‌ಗೇಟ್‌ಗಳಲ್ಲಿ ಅನಧಿಕೃತವಾಗಿ ಹೆಚ್ಚುವರಿ ಹಣ ಕಡಿತ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆನರಾ ಬಸ್‌ ಮಾಲಕರ ಸಂಘದವರು ಆಗಸ್ಟ್ 23ರಂದು ಬೆಳಗ್ಗೆ 9.30ರಿಂದ ಹೆಜಮಾಡಿ ಹಾಗೂ ಸಾಸ್ತಾನ ಟೋಲ್‌‌ಗೇಟ್‌ ಎದುರು ಮೌನ ಪ್ರತಿಭಟನೆ ನಡೆಸುವ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಪರ ಜಿಲ್ಲಾಧಿಕಾರಿ ಮಮತಾ ಅವರಿಗೆ ಮನವಿ ಸಲ್ಲಿಸಿದರು.

ಬಸ್‌ಗಳಿಗೆ ಮಾಮೂಲು ಟೋಲ್‌ ದರವಷ್ಟೇ ಅಲ್ಲದೆ ಘನ ವಾಹನ ಎಂದು ಪರಿಗಣಿಸಿ ದುಪ್ಪಟ್ಟು ಹಣವನ್ನು ಕಡಿತ ಮಾಡಲಾಗುತ್ತಿದ್ದು, ಇದನ್ನು ನಿಲ್ಲಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಬಸ್‌ ಮಾಲಕರಾದ ರಾಘವೇಂದ್ರ ಭಟ್‌, ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌, ವಸಂತ್‌ ಶೆಟ್ಟಿ, ಇಮಿಯಾಜ್‌ ಅಹಮದ್‌, ಗಣನಾಥ ಹೆಗ್ಡೆ ನಿಯೋಗದಲ್ಲಿದ್ದರು.

ಈ ಬಗ್ಗೆ ಈಗಾಗಲೇ ಹೆದ್ದಾರಿ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ