ಕೇಂದ್ರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕೇಂದ್ರ ಸರಕಾರ ಪ್ರಾಯೋಜಿತ ಯೋಜನೆಗಳಾದ ಪ್ರಧಾನಮಂತ್ರಿ ವಿಶ್ವಕರ್ಮ, ಸೂರ್ಯ‌ಘರ್ ಹಾಗೂ ಕಿಸಾನ್ ಸಮ್ಮಾನ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್, ವಿಶ್ವಕರ್ಮ ಯೋಜನೆ ಮತ್ತು ಸೂರ್ಯ ಘರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜನಸಾಮಾನ್ಯರ ಅನುಕೂಲಕ್ಕಾಗಿ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತದೆ. ಇವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಅವುಗಳ ಫಲಾನುಭವಿ‌ಗಳನ್ನಾಗಿಸುವ ಕಾರ್ಯವನ್ನು ಅಧಿಕಾರಿಗಳು ಸಮರ್ಪಕವಾಗಿ ಮಾಡಿದಾಗ ಮಾತ್ರ ಅವು ಜನರಿಗೆ ತಲುಪುತ್ತವೆ ಎಂದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗೆ ಕೃಷಿ ಚಟುವಟಿಕೆಯಲ್ಲಿ ಉತ್ತಮ ಪರಿಕರಣಗಳನ್ನು ಬಳಸಿ, ಬೆಳೆಗಳ ಆರೋಗ್ಯ ನಿರ್ವಹಣೆ ಮಾಡಿ, ಉತ್ತಮ ಇಳುವರಿ ಪಡೆಯುವುದರೊಂದಿಗೆ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಎಂಬ ಉದ್ದೇಶವಿದೆ ಎಂದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ