ಆಗುಂಬೆ ಘಾಟಿ : ಸೆ.15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಆಗುಂಬೆ : ನಿರಂತರ ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ.

ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ.

ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ