ಅಜೆಕಾರು ಸ್ಲೋ ಪಾಯಿಸನ್ ನೀಡಿ ಕೊಲೆ ಪ್ರಕರಣ – ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಕಾರ್ಕಳ : ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯ ಆದೇಶಿಸಿದೆ.

ಬಂಧಿತ ಪ್ರತಿಮಾಳನ್ನು ಪೊಲೀಸರು ಅಕ್ಟೋಬರ್ 25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನವೆಂಬರ್ 7ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವೇಳೆ ಮೂರು ದಿನಗಳ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ಅಕ್ಟೋಬರ್ 28ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇಬ್ಬರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಕಾರ್ಕಳ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು, ನ್ಯಾಯಾಲಯವು ಇಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !