ಕಾರ್ಕಳ ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷರಾಗಿ ಅಜಿತ್ ಹೆಗ್ಡೆ ನೇಮಕ

ಕಾರ್ಕಳ : ಗ್ಯಾರಂಟಿ ಯೋಜನೆಗಳ ಸಮರ್ಪಕ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಲು ಸರಕಾರದ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಗೊಳಿಸುವ ಬಗ್ಗೆ ನಾಮ ನಿರ್ದೇಶನ ಮಾಡಿ ಶಿಫಾರಸ್ಸು ಮಾಡಿರುತ್ತಾರೆ.

ಅಂತೆಯೇ ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷರಾಗಿ ಮಾಳ ಗ್ರಾಮದ ಅಜಿತ್ ಹೆಗ್ಡೆ ನೇಮಕಗೊಂಡಿದ್ದಾರೆ. ಇವರು ಕಾರ್ಕಳ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ ಹಾಗೂ ಮಾಳ ಪಂಚಾಯತ್‌ನಲ್ಲಿ 5 ವರ್ಷಗಳ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಕಾರ್ಕಳ ಬ್ಲಾಕ್ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿದ್ದಾರೆ. ಸಮಿತಿಯ ಸದಸ್ಯರಾಗಿ ರಜನಿ, ರಾಕೇಶ್ ನಾಯ್ಕ ಪ್ರಶಾಂತ್ ಪೂಜಾರಿ, ಚರಿತ ಎಂ., ಶೋಭಾ ರಾಣೆ, ಸಹೀಮಾ, ಜಯ ಕುಲಾಲ್, ಸುರೇಶ್ ಆಚಾರ್ಯ, ಸಂತೋಷ ದೇವಾಡಿಗ, ಸಂತೋಷ್ ಶೆಟ್ಟಿ, ವಿಶ್ವನಾಥ ಭಂಡಾರಿ, ಹೇಮಂತ್ ಆಚಾರ್ಯ, ಯತೀಶ್ ಕೋಟ್ಯಾನ್, ಫಿಲಿಪ್ ಮಸ್ಕರೇನಸ್ ಹಾಗೂ ಕಾರ್ಕಳ ತಾಲೂಕು ಪಂಚಾಯಕತ್ ಕಾರ್ಯನಿರ್ವಹಣಾಧಿಕಾರಿಯನ್ನು ನೇಮಕಗೊಂಡಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !