ಮದ್ಯದಲ್ಲಿ ಅಮಲು ಪದಾರ್ಥ ಬೆರೆಸಿ ಆರೋಪಿಗಳಿಂದ ಅತ್ಯಾಚಾರ – ಉಡುಪಿ ಎಸ್ಪಿ ಮಾಹಿತಿ

ಕಾರ್ಕಳ: ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಕೆ. ಆರೋಪಿಗಳ ವಿರುದ್ಧ ಶೀಘ್ರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಕುರಿತು ದೂರು ಬಂದಿದೆ. ಸಂತ್ರಸ್ತೆಗೆ ಆರೋಪಿ ಮೂರು ತಿಂಗಳಿನಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಸಂತ್ರಸ್ತೆಗೆ ಕರೆ ಮಾಡಿ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ. ಬಳಿಕ ಮದ್ಯದಲ್ಲಿ ಏನನ್ನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಝ್ ಮಾಡಲಾಗಿದೆ.

ಸಂತ್ರಸ್ತೆಗೆ ಸದ್ಯ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ